Karnataka Revenue Department Village Administrative Officer Recruitment 2024 – KEA Village Accountant VA Recruitment 2024‌‌

 

ಕರ್ನಾಟಕ ಕಂದಾಯ ಇಲಾಖೆ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ 2024 – KEA Village Accountant VA Recruitment 2024


KEA Village Accountant VA Recruitment 2024 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KEA Village Accountant VA Recruitment 2024 : Details of Vacancies

ಹುದ್ದೆ : ಗ್ರಾಮ ಆಡಳಿತ ಅಧಿಕಾರಿ (Village Accountant-VA)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ – ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು/

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1000 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಉಳಿಕೆ ಮೂಲ ವೃಂದ869
ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ131

ಶೈಕ್ಷಣಿಕ ಅರ್ಹತೆ : ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶ ದಷ್ಟು ಅಂಕಗಳನ್ನು ಕಳೆಯಲಾಗುವುದು). ಸ್ಪರ್ಧಾತ್ಮಕ ಪರೀಕ್ಷೆಯನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುವುದು.

ಕರ್ನಾಟಕ ಕಂದಾಯ ಇಲಾಖೆ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ 2024 – KEA Village Accountant VA Recruitment 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
• ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ, ವಿಕಲಚೇತನ ಅಭ್ಯರ್ಥಿಗಳು – ರೂ. 500

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04-ಮಾರ್ಚ್-202405 ಏಪ್ರಿಲ್ 2024 )
  •  ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು  ಕೊನೆಯ ದಿನಾಂಕ:03-ಏಪ್ರಿಲ್-202404ನೇ ಮೇ 2024 ರವರೆಗೆ ವಿಸ್ತರಿಸಲಾಗಿದೆ ) (15.05.2024 ರ ವರೆಗೆ ವಿಸ್ತರಿಸಲಾಗಿದೆ.)  28-09-2024 ರ ವರೆಗೆ ವಿಸ್ತರಿಸಲಾಗಿದೆ.
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ: 07-ಮೇ-2024 ( 22.05.2024ರ ವರೆಗೆ ವಿಸ್ತರಿಸಲಾಗಿದೆ.) 29.09.2024ರ ವರೆಗೆ ವಿಸ್ತರಿಸಲಾಗಿದೆ.


Karnataka Revenue Department VA Recruitment 2024 : Important Links


NOTIFICATIONCLICK HERE
APPLY ONLINECLICK HERE 
Telegram Join LinkClick Here
WhatsApp Channel LinkClick Here

Leave a Comment

Your email address will not be published. Required fields are marked *

Scroll to Top